ಹೊಳೆ ಹೊನ್ನೂರು: ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು.
ಗ್ರಾಮದ ಸುಮಾರು 76 ವರ್ಷದ ವ್ಯಕ್ತಿಯೋರ್ವ, 10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ. ನಂತರ ಮನೆಗೆ ಬಂದ ಬಾಲಕಿ ತನಗೆ ನೋವು ಆಗುತ್ತಿದೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ.
Advertisement. Scroll to continue reading.
ನಂತರ ರಕ್ತಸ್ರಾವದಿಂದ ನೋವು ಹೆಚ್ಚಾಗಿದ್ದರಿಂದ ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ. ಬಳಿಕ ಪೊಲೀಸ್ ಠಾಣೆಗೆ ಬಂದು ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Advertisement. Scroll to continue reading.