ತಿರುಪತಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದರು. ತಿಮ್ಮಪ್ಪನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು
ಈ ಕುರಿತ ಚಿತ್ರಗಳನ್ನು ಪ್ರಧಾನಿ ಮೋದಿ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
140 ಕೋಟಿ ಭಾರತೀಯರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದೆ ಎಂದು ಬರೆದುಕೊಂಡಿದ್ದಾರೆ.
Advertisement. Scroll to continue reading.
ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ್ದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡಿದ್ದರು. ದೇವರ ದರ್ಶನದ ನಂತರ ಪ್ರಧಾನಿ ತೆಲಂಗಾಣಕ್ಕೆ ತೆರಳಲಿದ್ದಾರೆ.
ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 30 ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ತೆಲಂಗಾಣಕ್ಕೂ ಮುನ್ನ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿದೆ.