ರಾಜ್ಯ

2023 – 24 ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

1

ಬೆಂಗಳೂರು : 2023-24ನೇ ಸಾಲಿನ SSLC ಹಾಗೂ ದ್ವಿತೀಯ PUC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 2023-243 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ಯು ದಿನಾಂಕ 25-03-2024ರಿಂದ ಆರಂಭಗೊಂಡು, ದಿನಾಂಕ 06-04-2024ರಂದು ಕೊನೆಗೊಳ್ಳಲಿದೆ.
ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ದಿನಾಂಕ 02-03-2024ರಿಂದ ದಿನಾಂಕ 22-03-2024ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಆಕ್ಷೇಪಣೆಗೆ ಅವಕಾಶ :

ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ:01-12-2023 ರಿಂದ 15-12-2023 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ ಎಂದು ಹೇಳಿದೆ.
ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: chairpersonkseab@gmail.comಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದಿದೆ.

Advertisement. Scroll to continue reading.

ಎಸ್ಎಸ್ಎಲ್‌ಸಿ ವೇಳಾಪಟ್ಟಿ :

ದಿನಾಂಕ 02-03-2024 ಶನಿವಾರ – ಕನ್ನಡ, ಅರೇಬಿಕ್
ದಿನಾಂಕ 03-03-2024 ಸೋಮವಾರ – ಇತಿಹಾಸ, ಭೌತಶಾಸ್ತ್ರ
ದಿನಾಂಕ 05-03-2024 ಮಂಗಳವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ದಿನಾಂಕ 06-03-2024 ಬುಧವಾರ – ಸಮಾಜ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ದಿನಾಂಕ 07-03-2024 ಗುರುವಾರ – ಹಿಂದಿ
ದಿನಾಂಕ 09-03-2024 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 11-03-2024 ಸೋಮವಾರ – ಇಂಗ್ಲೀಷ್
ದಿನಾಂಕ 12-03-2024 ಮಂಗಳವಾರ – ತೆಲುಗು, ತಮಿಳು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ದಿನಾಂಕ 13-03-2024 ಬುಧವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 14-03-2024 ಗುರುವಾರ – ಗಣಿತ, ಶಿಕ್ಷಣ ಶಾಸ್ತ್ರ
ದಿನಾಂಕ 16-03-2024 ಶನಿವಾರ – ಭೂಗೋಳಶಾಸ್ತ್ರ, ಜೀವಶಾಸ್ತ್ರ
ದಿನಾಂಕ 18-03-2024 ಸೋಮವಾರ – ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ.
ದಿನಾಂಕ 20-03-2024 ಬುಧವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ.
ದಿನಾಂಕ 22-03-2024 ಶುಕ್ರವಾರ – ಅರ್ಥಶಾಸ್ತ್ರ.

ದ್ವಿತೀಯ ಪಿಯುಸಿ ವೇಳಾಪಟ್ಟಿ :
ದಿನಾಂಕ 25-03-2024 ಸೋಮವಾರ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ (NCRTC), ಸಂಸ್ಕೃತ
ದಿನಾಂಕ 27-03-2024 ಬುಧವಾರ – ಸಮಾಜ ವಿಜ್ಞಾನ
ದಿನಾಂಕ 30-03-2024 ಶನಿವಾರ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ
ದಿನಾಂಕ 02-04-2024 ಮಂಗಳವಾರ – ಗಣಿತ, ಸಮಾಜ ಶಾಸ್ತ್ರ
ದಿನಾಂಕ 03-04-2024 ಬುಧವಾರ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2. ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI ‘C’, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ದಿನಾಂಕ 04-04-2024 ಗುರುವಾರ – ಹಿಂದಿ(NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಅಪರೆಲ್ಸ್ ಮೇಡ್ ಆಪ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್.
ದಿನಾಂಕ 06-04-2024 ಶನಿವಾರ – ದ್ವಿತೀಯ ಭಾಷೆ- ಇಂಗ್ಲೀಷ್, ಕನ್ನಡ

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com