ಕುಂದಾಪುರ : ಬೈಕ್ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಬೈಂದೂರು – ಕುಂದಾಪುರ ರಸ್ತೆ ಬಳಿ ಗುರುವಾರ ಸಂಜೆ ನಡೆದಿದೆ. ಮಹಾಬಲ ಮೃತ ವ್ಯಕ್ತಿ.
ಹೆಮ್ಮಾಡಿಯ ಹಾಲಿ ಡೈರಿ ಜಂಕ್ಷನ್ನ ಉತ್ತರ ಬದಿಯ ಬೈಂದೂರು – ಕುಂದಾಪುರ ರಸ್ತೆಯನ್ನು ದಾಟಿ ಬಂದು ಉತ್ತರ ಬದಿಯ ಮಣ್ಣು ರಸ್ತೆಯಲ್ಲಿ ನಿಲ್ಲಿಸಿಕೊಂಡಿರುವಾಗ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
Advertisement. Scroll to continue reading.
ಪರಿಣಾಮ ಮಹಾಬಲ ರವರು ಬೈಕ್ ಸಮೇತ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷೀಸಿದ ವೈದ್ಯರು ಮಹಾಬಲರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.