ರಾಷ್ಟ್ರೀಯ

ಕಂದಕಕ್ಕೆ ಉರುಳಿ ಬಿದ್ದ ಬಸ್; ಓರ್ವ ಸಾವು, ಹಲವರಿಗೆ ಗಾಯ

2

ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ.

45 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಚೆನ್ನೈ-ತ್ರಿಚಿ ರಾಷ್ಟ್ರೀಯ ಹೆದ್ದಾರಿಯ ಪಜವೆಲಿ ಗ್ರಾಮದ ಪಕ್ಕದಲ್ಲಿರುವ ಚೆಂಗಲ್ಪಟ್ಟು ಜಿಲ್ಲೆಯ ಬಳಿ ಕಂದಕಕ್ಕೆ ಬಿದ್ದಿದೆ.

Advertisement. Scroll to continue reading.

ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ ಎನ್ನಲಾಗಿದೆ.

ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಿಗೆ ಒಳಗಾದ ಇಪ್ಪತ್ತು ಜನರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಚೆಂಗಲಪಟ್ಟು ಜಿಲ್ಲೆಯ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಚೆಂಗಲಪಟ್ಟು ತಾಲೂಕು ಪೊಲೀಸರು ತಿಳಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com