ರಾಷ್ಟ್ರೀಯ

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ; ಡಿ.7 ಕ್ಕೆ ಪ್ರಮಾಣವಚನ

1

ನವದೆಹಲಿ : ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅವರನ್ನು ಕಾಂಗ್ರೆಸ್‌ ಮಂಗಳವಾರ ಅಧಿಕೃತವಾಗಿ ಆಯ್ಕೆ ಮಾಡಿದೆ.ಅವರು ಗುರುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ರೇವಂತ್ ರೆಡ್ಡಿ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.

ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ಶಾಸಕಾಂಗ ಪಕ್ಷದ ಮುಖ್ಯಸ್ಥರನ್ನಾಗಿ ಇಂದು ಸಂಜೆ ಔಪಚಾರಿಕವಾಗಿ ಆಯ್ಕೆ ಮಾಡಲಾಯಿತು. ಡಿಸೆಂಬರ್ 7 ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದರು.

Advertisement. Scroll to continue reading.

ಮಲ್ಕಜ್ ಗಿರಿ ಲೋಕಸಭಾ ಕ್ಷೇತ್ರದ ಸಂಸದ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ 56 ವರ್ಷದ ರೇವಂತ್ ರೆಡ್ಡಿ ಅವರು 2017ರಲ್ಲಿ ತೆಲುಗು ದೇಶಂ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು.

    ಡಿಸೆಂಬರ್ 3 ರಂದು ನಡೆದಿದ್ದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 65 ಸ್ಥಾನಗಳನ್ನು ಗೆದ್ದು ಬೀಗಿತ್ತು. ಸ್ಪಷ್ಟ ಬಹುಮತಕ್ಕೆ 60 ಸ್ಥಾನಗಳ ಅವ್ಯಕತೆ ಇದೆ. ಬಿಆರ್‌ಎಸ್ 39, ಬಿಜೆಪಿ 8 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

    Click to comment

    You May Also Like

    Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com