ಅಲಹಾಬಾದ್ : ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಪೂರ್ಣಗೊಳಿಸಿದೆ, ಈ ಕುರಿತ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಅವರು ಕಕ್ಷಿದಾರರ ಪರ ವಕೀಲರ ವಾದ ಆಳಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದರು. ಪ್ರಕರಣದ ತೀರ್ಪಿನ ದಿನಾಂಕವನ್ನು ನ್ಯಾಯಾಲಯ ನಿರ್ಧರಿಸಲಿದೆ.
ವಾರಣಾಸಿಯ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಹಾಗೂ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾಯೋಗ್ಯತೆಯನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿವೆ.
Advertisement. Scroll to continue reading.
ಪ್ರಸ್ತುತ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಪುರಾತನ ದೇವಾಲಯ ಮರುಸ್ಥಾಪಿಸುವಂತೆ ಕೋರಿ ದಾವೆ ಹೂಡಲಾಗಿದೆ. ಮಸೀದಿಯು ದೇವಾಲಯದ ಒಂದು ಭಾಗವಾಗಿತ್ತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.
Advertisement. Scroll to continue reading.