ಉತ್ತರ ಪ್ರದೇಶ : ಶನಿವಾರ ರಾತ್ರಿ 11 ಗಂಟೆಗೆ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ದಾಟಿ ಮತ್ತೊಂದು ರಸ್ತೆಗೆ ನುಗ್ಗಿ ಡಂಪರ್ ವಾಹನಕ್ಕೆ ಗುದ್ದಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಮಗು ಸಹಿತ 8 ಮಂದಿ ಸಾವನ್ನಪ್ಪಿದ್ದಾರೆ.
ಕಾರು ಲಾಕ್ ಆಗಿ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿ ಮಗು ಸೇರಿದಂತೆ ಒಟ್ಟು 8 ಜನರಿದ್ದರು. ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ಬಹೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾಮ್ ನಗರದ ನಿವಾಸಿಗಳಾಗಿದ್ದಾರೆ. ಸದ್ಯಕ್ಕೆ ಮೃತಪಟ್ಟಿರುವವರ ಪೈಕಿ ಫುರ್ಕಾನ್, ಆರಿಫ್ ಮತ್ತು ಆಸಿಫ್ ಎಂಬ ಮೂವರನ್ನು ಗುರುತಿಸಲಾಗಿದೆ. ಆರಿಫ್‌ಗೆ 8 ದಿನಗಳ ಹಿಂದಷ್ಟೇ ವಿವಾಹವಾಗಿತ್ತು. ಈ ಸಮಾರಂಭದ ವಿವಿಧ ಕಾರ್ಯಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು.
Advertisement. Scroll to continue reading.
ಕಾರು ಡಂಪರ್ ಗೆ ಡಿಕ್ಕಿ ಹೊಡೆದಾಗ, ಬಹಳ ದೊಡ್ಡ ಸ್ಫೋಟ ಸಂಭವಿಸಿದೆ.
ಹೆದ್ದಾರಿಯಲ್ಲಿ ವಾಸಿಸುತ್ತಿದ್ದ ಜನರು ತಮ್ಮ ಮನೆಗಳಿಂದ ಹೊರ ಬಂದು ಬೆಂಕಿ ನಿಯಂತ್ರಣ ಮಾಡಲು ಮುಂದಾಗಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಬರೇಲಿ ಎಸ್‌ಎಸ್ಪಿ ಡಾ.ರಾಕೇಶ್ ಕುಮಾರ್ ಸೇರಿದಂತೆ ಅಧಿಕಾರಿಗಳು ಘಟನ ಸ್ಥಳಕ್ಕೆ ತಲುಪಿಸಿದ್ದು, ಅಗ್ನಿಶಾಮಕ ದಳದ ತಂಡವು ಬೆಂಕಿಯನ್ನು ನಂದಿಸಿತು ಎನ್ನಲಾಗಿದೆ.
ಘುಲೆ ಸುಶೀಲ್ ಚಂದ್ರಭಾನ್ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ, ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿದೆ, ಇದರಿಂದಾಗಿ ಜನರು ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಇನ್ನು, ಎಂಟು ಜನರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಡಂಪರ್ ಚಾಲಕ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
Advertisement. Scroll to continue reading.