ರಾಷ್ಟ್ರೀಯ

ಜಮ್ಮು – ಕಾಶ್ಮೀರದ 370 ನೇ ವಿಧಿ ರದ್ದು; ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

1

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಲಾಗಿದ್ದ ಸಂವಿಧಾನದ ಅರ್ಟಿಕಲ್ 370 ವಿಧಿ ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆರ್ಟಿಕಲ್ 370 ಅಡಿ ನೀಡಲಾಗಿದ್ದ ವಿಶೇಷಾಧಿಕಾರ ಕೇವಲ ತಾತ್ಕಾಲಿಕ ನಿರ್ಧಾರವಷ್ಟೇ ಆಗಿತ್ತು ಎಂದಿದೆ.

ದೇಶದ ಎಲ್ಲಾ ರಾಜ್ಯಗಳು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿವೆ. ಸಂವಿಧಾನ ವಿಧಿ 371ರಿಂದ ಜೆ ವರೆಗೆ ವಿವಿಧ ರಾಜ್ಯಗಳ ವಿಶೇಷ ವ್ಯವಸ್ಥೆಗಳ ಉದಾಹರಣೆಗಳಾಗಿವೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರವು ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ.

ಕಲಂ 370 ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ನಾವು ತೀರ್ಪಿಗೆ ಬಂದಿದ್ದೇವೆ. ಮಧ್ಯಂತರ ಪ್ರಕ್ರಿಯೆಯನ್ನು ಪೂರೈಸಲು ಪರಿವರ್ತನಾ ಉದ್ದೇಶವನ್ನು ಪೂರೈಸಲು ಇದನ್ನು ಪರಿಚಯಿಸಲಾಗಿದೆ. ಇದು ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಗಳ ಕಾರಣದಿಂದಾಗಿ ತಾತ್ಕಾಲಿಕ ಉದ್ದೇಶಕ್ಕಾಗಿತ್ತು. ಹೀಗಾಗಿ ಇದು ಸಂವಿಧಾನದ ಭಾಗ 21 ರಲ್ಲಿ ಇರಿಸಲಾಗಿದೆ.

Advertisement. Scroll to continue reading.

ಆರ್ಟಿಕಲ್ 370 ಅಸ್ತಿತ್ವದಲ್ಲಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸುವ ರಾಷ್ಟ್ರಪತಿಗಳ ಅಧಿಕಾರವು ಜಮ್ಮು-ಕಾಶ್ಮೀರ ಸಂವಿಧಾನ ಸಭೆಯ ವಿಸರ್ಜನೆಯ ನಂತರವೂ ಅಸ್ತಿತ್ವದಲ್ಲಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಇಂದು ತೀರ್ಪಿನ ಪ್ರತಿಯನ್ನು ಓದುತ್ತಾ ಪ್ರಕಟಿಸಿದರು.

ಸೆಪ್ಟೆಂಬರ್ 30ರೊಳಗೆ ಚುನಾವಣೆಗೆ ಆದೇಶ:

ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ 2024ರ ಸೆಪ್ಟೆಂಬರ್ 30ರೊಳಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಬೇಕು ಎಂದು ಸಹ ಆದೇಶ ನೀಡಿದೆ. 

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com