ರಾಷ್ಟ್ರೀಯ

ರಾಜಸ್ಥಾನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ

1

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ಬಿಜೆಪಿ ಮಂಗಳವಾರ ಘೋಷಿಸಿದೆ.

ಬಿಜೆಪಿ ಪರವಾಗಿ ಶಾಸಕಾಂಗ ಪಕ್ಷದ ಸಭೆಯ ನಂತರ ಇದನ್ನು ಘೋಷಿಸಲಾಯಿತು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅವರ ಹೆಸರನ್ನು ಘೋಷಿಸಲಾಯಿತು. ಇವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಾಗಿದ್ದು, ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಆಯ್ಕೆ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಗಾಗಿ ಹೊಸ ಮುಖಗಳನ್ನು ಬಿಜೆಪಿ ಹೈಕಮಾಂಡ್ ಮಾಡಿದಂತಿದೆ. ಈ ಮೂಲಕ ಛತ್ತೀಸ್‌ಗಢ, ಮಧ್ಯಪ್ರದೇಶ ಇದೀಗ ರಾಜಸ್ಥಾನದಲ್ಲಿಯೂ ಹೊಸ ಮುಖಕ್ಕೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. 

Advertisement. Scroll to continue reading.

ಸಾಂಗನೇರ್ ಕ್ಷೇತ್ರದ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ಅಮಿತ್ ಶಾ ಆಪ್ತರಾಗಿದ್ದಾರೆ. ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಭಜನ್ ಲಾಲ್ ಶರ್ಮಾ 48,000 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಪ್ರೇಮ್ ಚಂದ್ ಬೈರ್ವಾ ಹಾಗೂ ದಿಯಾ ಕುಮಾರಿ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. 

ಬಾಬಾ ಬಾಲಕನಾಥ್, ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಜೈಪುರ ರಾಜಮನೆತನದ ದಿಯಾ ಕುಮಾರಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಮತ್ತು ಹಿರಿಯ ನಾಯಕ ಕಿರೋಡಿ ಲಾಲ್ ಮೀನಾ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳಾಗಿದ್ದರು. 

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com