ಖ್ಯಾತ ನಟ ಶ್ರೇಯಸ್ ತಲ್ಪಾಡೆ ಅವರಿಗೆ ಹೃದಯಾಘಾತವಾಗಿದೆ. ಅವರು ಮುಂಬೈನಲ್ಲಿ ಗುರುವಾರ ಸಂಜೆ ಚಿತ್ರೀಕರಣ ಮುಗಿಸಿದ ಕೂಡಲೇ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಅಂಧೇರಿ ಪಶ್ಚಿಮದಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಲಾಗಿದ್ದು, ಅಲ್ಲಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಅಂತ ತಿಳಿದು ಬಂದಿದೆ.
Advertisement. Scroll to continue reading.
47 ವರ್ಷದ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಹಿಂದಿ, ಮರಾಠಿ ಭಾಷೆಯ 45 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಗೋಲ್ ಮಾಲ್ ಚಿತ್ರ, ಹೌಸ್ ಫುಲ್ 2 ಮೊದಲಾದ ಚಿತ್ರಗಳಿಂದ ಖ್ಯಾತರಾಗಿದ್ದರು.