ಕರಾವಳಿ

ಕಾಪು : ಲೀಲಾಧರ ಶೆಟ್ಟಿ ಸಾಕು‌ ಮಗಳು ನಾಪತ್ತೆ ಪ್ರಕರಣ; ನಾಲ್ವರ ಬಂಧನ

1

ಕಾಪು : ಸಮಾಜ ಸೇವಕ ದಿ.ಲೀಲಾಧರ ಶೆಟ್ಟಿ ಅವರ ಪುತ್ರಿಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಕಾಪು ಪೊಲೀಸರು ಕಾಸರಗೋಡಿನ ಕುಂಬ್ಳೆಯಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಪುತ್ರಿಯ ಸ್ನೇಹಿತರಾದ ಶಿರ್ವ ನಿವಾಸಿ ಗಿರೀಶ್ (20), ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಜೀಜ್ ಎಂದು ಗುರುತಿಸಲಾಗಿದೆ.

ಲೀಲಾಧರ ಶೆಟ್ಟಿ ಅವರ ದತ್ತು ಪುತ್ರಿ ಡಿ.11 ರಂದು ಮನೆಯಿಂದ ನಾಪತ್ತೆಯಾಗಿದ್ದಳು. ಮಗಳು ನಾಪತ್ತೆಯಾದ ಚಿಂತೆಯಲ್ಲಿ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಮರ್ಯಾದೆಗೆ ಅಂಜಿ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

Advertisement. Scroll to continue reading.

ಅಪಹರಣ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಗಿರೀಶ್ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಳಿದ ಮೂವರ ವಿರುದ್ಧ ಅಪಹರಣಕ್ಕೆ ನೆರವು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಪೊಲೀಸರು ಎರಡು ಸ್ಕೂಟಿಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com