ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement. Scroll to continue reading.