ಬೆಂಗಳೂರು : ರಾಜ್ಯದಲ್ಲಿ ಕೊರೋನ ಸೋಂಕಿಗೆ ವ್ಯಕ್ತಿ ಬಲಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮೃತ 64 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರು ಚಾಮರಾಜ ಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದಿದ್ದಾರೆ.
ಇನ್ನೂ ಮೃತ ವ್ಯಕ್ತಿಗೆ ಹಲವು ಖಾಯಿಲೆಗಳು ಇದ್ದವು. ಕಿಡ್ನಿ ವೈಫಲ್ಯ, ಅಸ್ತಮಾ, ಟಿಬಿ, ಹೈಪರ್ ಟೆನ್ಶನ್, ಇತ್ತು. ಈ ನಡುವೆ ಕೊರೊನಾ ಪಾಸಿಟಿವ್ ಕೂಡ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 5 ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಕುಟುಂಬದಲ್ಲಿ ಒಟ್ಟು 5 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ವೇಳೆ ಐವರಿಗೂ ನೆಗೆಟಿವ್ ಬಂದಿದೆ. ಸದ್ಯ ಐದು ಜನರು ಕೂಡ ಕ್ವಾರಂಟೈನ್ ನಲ್ಲಿ ಇದ್ದಾರೆ. ಮೃತಪಟ್ಟ ವ್ಯಕ್ತಿಯ ಜೆನೆಮಿಕ್ ಸೀಕ್ವೆನ್ಸ್ ರಿಪೋರ್ಟ್ ಗಾಗಿ ಬಿಬಿಎಂಪಿ ಕಾಯುತ್ತಿದೆ ಎಂದರು.
Advertisement. Scroll to continue reading.