ಬೆಂಗಳೂರು : ರಾಜ್ಯದಲ್ಲಿ ಬುಧವಾರ ಹೊಸದಾಗಿ 22 ಜನರಿಗೆ ಸೋಂಕು ತಗುಲಿದೆ. ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ.
ಕೊರೋನಾ ಸೋಂಕು ತಗುಲಿದ್ದ 44 ವರ್ಷದ ವ್ಯಕ್ತಿ, 76 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಬೆಂಗಳೂರು ನಗರ 19, ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಇಂದು ಕೊರೋನಾ ಸೋಂಕು ತಗುಲಿದೆ.
Advertisement. Scroll to continue reading.
ಕೋವಿಡ್ ಉಪತಳಿ ಜೆಎನ್.1 ವೈರಸ್ ಬಗ್ಗೆ ಅಲರ್ಟ್ ಆಗಿರುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳನ್ನು ಅಲರ್ಟ್ ಮಾಡಿದೆ. ಕೋವಿಡ್ ಹೆಚ್ಚಾಗ್ತಿರೋ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವರ್ಚೂವಲ್ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.