ಉಡುಪಿ : ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಅಫ್ಕಾರ್(17) ಮೃತ ವಿದ್ಯಾರ್ಥಿ.
ಅಫ್ಕಾರ್ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ಸಕ್ರಿಯ ಸದಸ್ಯನಾಗಿದ್ದ.
Advertisement. Scroll to continue reading.
ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಫ್ಕಾರ್,ಡಿ.6 ರಂದು ನಾರಾಯಣ ಹೃದಯಾಲದಲ್ಲಿ ಚಿಕಿತ್ಸೆ ಪಡೆದು ಡಿ.18 ರಂದು ಆಸ್ಪತ್ರೆಯಿಂದ ಮರಳಿದ್ದ. ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರು ಪೇರಾಗಿ, ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಮೃತರು ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯರಾದ ಇದ್ರಿಸ್ ಹೂಡೆಯವರ ಸಹೋದರ ಅನ್ವರ್ ಕೆಯವರ ಪುತ್ರ.
Advertisement. Scroll to continue reading.