ಕುಂದಾಪುರ : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ಟಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ(22) ಮೃತಪಟ್ಟವರು.
ಲೆಸ್ಟನ್ ಪಿಂಟೊ(22), ಜಸ್ಟಿನ್ ಕಾರ್ಡೋಝ್(22), ವಿಲ್ಸನ್ ಮಾರ್ಟಿಸ್(23) ಮತ್ತು ಗ್ಲಾಡೆನ್ ಡಿಸಿಲ್ವ(23) ಗಾಯಗೊಂಡವರು.
Advertisement. Scroll to continue reading.
ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಜೋಯಿಸ್ಟನ್ ಕ್ಯಾಸ್ಟಲಿನೋ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಜೋಯಿಸ್ಟನ್ ಕ್ಯಾಸ್ಟಲಿನೋ ಉದ್ಯಾವರದ ಐಸಿವೈಎಂ (Indian Catholic Youth Movement) ಅಧ್ಯಕ್ಷರಾಗಿದ್ದರು ಎಂದು ತಿಳಿದುಬಂದಿದೆ.
ಕುಂದಾಪುರ ಸಂಚಾರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ, ಪರಿಶೀಲಿಸಿದ್ದಾರೆ.
Advertisement. Scroll to continue reading.