ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.
ಠಾಣಮಂಡಿ-ಸುರನಕೋಟೆ ರಸ್ತೆಯ ಸಾವನಿ ಪ್ರದೇಶದಲ್ಲಿ ಹೊಂಚು ಹಾಕಿ ಕುಳಿತಿದ್ದ ಉಗ್ರರು, ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ
ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಎನ್ಕೌಂಟರ್ ಪ್ರಾರಂಭವಾಯಿತು.
Advertisement. Scroll to continue reading.
ಭಯೋತ್ಪಾದಕರು ಸೇನಾ ವಾಹನದ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ಉಗ್ರರನ್ನು ಪತ್ತೆಹಚ್ಚಲಾಗಿದ್ದು, ಆ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಮತ್ತು ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಅಂದ್ಹಾಗೆ, ಪೂಂಚ್ ದಾಳಿಯು ಒಂದು ತಿಂಗಳೊಳಗೆ ಸೇನೆಯ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ.
Advertisement. Scroll to continue reading.