ರಾಜ್ಯ

ರಾಜ್ಯದಲ್ಲಿ ಇಂದು 24 ಜನರಿಗೆ ಕೊರೋನಾ ಪಾಸಿಟಿವ್

1

ಬೆಂಗಳೂರು : ದೇಶದೆಲ್ಲೆಡೆ ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 24 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,174 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

1,791 RT-PCR ಸೇರಿದಂತೆ ಒಟ್ಟು 2,263 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 24 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 23 ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 93 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ವರದಿಯಾಗಿದೆ. ಇಂದು ಆಸ್ಪತ್ರೆಯಿಂದ 11 ಮಂದಿ ಡಿಸ್ಜಾರ್ಜ್ ಆಗಿದ್ದು, ರಾಜ್ಯದಲ್ಲಿ ಒಟ್ಟು 105 ಸಕ್ರಿಯ ಕೊರೋನಾ ಕೇಸ್‍ಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 105 ಪ್ರಕರಣಗಳಲ್ಲಿ, 85 ಜನರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಮತ್ತು 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ 20 ಮಂದಿಯಲ್ಲಿ ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com