ಕ್ರೀಡೆ

WFI ನೂತನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ನೇಮಕ; ಕುಸ್ತಿ ತೊರೆದ ಸಾಕ್ಷಿ ಮಲಿಕ್!

0

ನವದೆಹಲಿ : ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (WFI) ಹೊಸ ಅಧ್ಯಕ್ಷರಾಗಿ ಗುರುವಾರ ಆಯ್ಕೆ ಮಾಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಖ್ಯಾತ ಕುಸ್ತಿ ಪಟು ಸಾಕ್ಷಿ ಮಲಿಕ್ ಅವರು ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಅಲ್ಲದೇ, ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರ ಪ್ಯಾನೆಲ್ 40 ಮತಗಳಿಂದ ಗೆದ್ದರೆ ಇನ್ನೊಂದು ಪ್ಯಾನೆಲ್ 7 ಮತಗಳನ್ನು ಪಡೆದುಕೊಂಡಿತು. ವಿಜೇತರ ಘೋಷಣೆಯ ನಂತರ, ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಗುರುವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾವು 40 ದಿನಗಳ ಕಾಲ ರಸ್ತೆಗಳಲ್ಲಿ ಮಲಗಿದ್ದೇವೆ. ಈ ವರ್ಷದ ಆರಂಭದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ನಮ್ಮನ್ನು ಬೆಂಬಲಿಸಲು ಬಂದ ನಮ್ಮ ದೇಶದ ಹಲವಾರು ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ.

Advertisement. Scroll to continue reading.

ಬ್ರಿಜ್ ಭೂಷಣ್ ಸಿಂಗ್ ಅವರ ವ್ಯಾಪಾರ ಪಾಲುದಾರ ಮತ್ತು ನಿಕಟ ಸಹವರ್ತಿ ಡಬ್ಲ್ಯುಎಫ್‌ಐ ಅಧ್ಯಕ್ಷನಾಗಿ ಆಯ್ಕೆಯಾಗಿದ್ದಕ್ಕೆ ನಾನು ಕುಸ್ತಿಯನ್ನು ತ್ಯಜಿಸುತ್ತಿದ್ದೇನೆ” ಎಂದಿದ್ದಾರೆ.

ಬಳಿಕ ಸಾಕ್ಷಿ ಮಲಿಕ್ ಅವರು ಕಣ್ಣೀರಿಡುತ್ತಾ ಆವರಣದಿಂದ ನಿರ್ಗಮಿಸಿದರು.

ಉತ್ತರಪ್ರದೇಶ ಬಿಜೆಪಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟಿಸಿದ ಸಾಕ್ಷಿ ಮಲಿಕ್ ಮತ್ತು ಇತರ ಕುಸ್ತಿಪಟುಗಳು, ಅನಿತಾ ಶೆಯೋರಾನ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಲು ಬೆಂಬಲಿಸಿದರು.

ಅನಿತಾ ಶೆಯೋರಾನ್ ಅವರು ರಾಷ್ಟ್ರೀಯ ಕುಸ್ತಿ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಲು ಸ್ಪರ್ಧೆಯಲ್ಲಿದ್ದರು. ಆದರೆ,47ರಲ್ಲಿ 7 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾದರು. ಹೀಗಾಗಿ ಭಾರೀ ಅಂತರದಿಂದ ಸೋಲೊಪ್ಪಬೇಕಾಯಿತು.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com