ಮಂಗಳೂರಿನಲ್ಲಿ ಕೊವಿಡ್‌ನಿಂದ 40 ವರ್ಷದ ವ್ಯಕ್ತಿ ಸಾವನ್ನಪಿರುವ ಬಗ್ಗೆ ವರದಿಯಾಗಿದೆ. ಮೃತ ವ್ಯಕ್ತಿಯು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ದಿನದ ಹಿಂದೆ ಮೃತ ವ್ಯಕ್ತಿಗೆ ಕೊವಿಡ್ ಇರೋದು ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.
ಇನ್ನು ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಲಸೆ ಕಾರ್ಮಿಕನಾಗಿ ಮಂಗಳೂರಿಗೆ ಬಂದಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ. ಕೋವಿಡ್ ನಿಂದಲೇ ಸಾವು ಆಗಿದೆಯಾ ಎಂದು ವೈದ್ಯರು ದೃಢಪಡಿಸಬೇಕಾಗಿದೆ ಎಂದರು.
Advertisement. Scroll to continue reading.
ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್ಲೈನ್ಸ್ ಇಲ್ಲ. ಜನ ಇರುವ ಪ್ರದೇಶದಲ್ಲಿ ಮಾಸ್ಕ್ ಧರಿಸಲು ಸಲಹೆ ಕೊಡುತ್ತೇವೆ. ಯಾವುದೂ ಕಡ್ಡಾಯ ಅಲ್ಲ, ನಾವು ಯಾವುದೇ ನಿರ್ಬಂಧ ವಿಧಿಸಲ್ಲ. ಕೊರೊನಾ ಉಪತಳಿ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಅಷ್ಟು ತೀವ್ರವಾಗಿಲ್ಲ. ಸೋಮವಾರ ಅಥವಾ ಮಂಗಳವಾರ ಸಂಪುಟ ಉಪಸಮಿತಿ ಸಭೆ ನಡೆಯಲಿದೆ. ಕೇಂದ್ರ ಮತ್ತು ಬೇರೆ ರಾಜ್ಯಗಳ ಮಾಹಿತಿ ಪಡೆದು ಬಳಿಕ ಏನು ಮಾಡಬೇಕೆಂದು ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
Advertisement. Scroll to continue reading.