ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಸೌಲಭ್ಯ ಪಡೆಯಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ
Advertisement. Scroll to continue reading.
ದೂರವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.