ರಾಷ್ಟ್ರೀಯ

ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ; ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1

ನವದೆಹಲಿ : ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ೯೯ನೇ ಜನ್ಮದಿನ ಅಂಗವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು.

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಅನುರಾಗ್ ಠಾಕೂರ್, ಅಶ್ವಿನಿ ವೈಷ್ಣವ್, ಜಿತೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ಆಗಮಿಸಿ ಗೌರವವನ್ನು ಸಲ್ಲಿಸಿದರು.

Advertisement. Scroll to continue reading.

ಇದಕ್ಕೂ ಮೊದಲು ಎಕ್ಸ್ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿ, ದೇಶದ ಎಲ್ಲಾ ಜನತೆಯ ಪರವಾಗಿ, ಮಾಜಿ ಪ್ರಧಾನಿ ಗೌರವಾನ್ವಿತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಗೌರವವನ್ನು ಸಲ್ಲಿಸುತ್ತಿದ್ದೇನೆ. ವಾಜಪೇಯಿಯವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣದ ವೇಗವನ್ನು ಹೆಚ್ಚಿಸುವಲ್ಲಿ ನಿರತರಾಗಿದ್ದರು. ಭಾರತಮಾತೆ ಕುರಿತು ಅವರಲ್ಲಿದ್ದ ಸಮರ್ಪಣೆ ಮತ್ತು ಸೇವೆಯು ಸ್ಫೂರ್ತಿಕರವಾಗಿದೆ ಎಂದು ಹೇಳಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com