ಮುಂಬೈ : ಭಾರತೀಯ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ಎರಡೂ ಮಾದರಿಗಳ ತಂಡಗಳಿಗೆ ಹರ್ಮನ್‌ಪ್ರೀತ್ ಕೌರ್ ಸಾರಥಿ.
ಸೈಕಾ ಇಶಾಕ್, ಶ್ರೇಯಾಂಕಾ ಪಾಟೀಲ್, ಟಿಟಾಸ್ ಸಾಧು ಮತ್ತು ಮನ್ನತ್ ಕಶ್ಯಪ್ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ಕೂಡ ಏಕದಿನ ಕ್ರಿಕೆಟ್‌ಗೆ ಮರಳಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ಪಂದ್ಯ ಡಿಸೆಂಬರ್ 28ರಂದು ನಡೆಯಲಿದೆ.
Advertisement. Scroll to continue reading.
ಎರಡನೇ ಪಂದ್ಯ ಡಿಸೆಂಬರ್ 30 ಹಾಗೂ ಸರಣಿಯ ಕೊನೆಯ ಪಂದ್ಯ 2024ರ ಜನವರಿ 2ರಂದು ನಡೆಯಲಿದೆ.
ಏಕದಿನ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (WK), ರಿಚಾ ಘೋಷ್ (WK), ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಮನ್ನತ್ ಕಶ್ಯಕ್, ಸೈಕಾ ಇಶಾಕ್, ರೇಣುಕಾ ಸಿಂಗ್, ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್..
ಟಿ20 ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಾಕ್), ರಿಚಾ ಘೋಷ್ (ವಿಕೆ), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಕಪ್, ಸೈಕಾ ಇಶಾಕ್, ರೇಣುಕಾ ಸಿಂಗ್. ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ
Advertisement. Scroll to continue reading.