ರಾಜ್ಯ

ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ 3 ಅಸ್ಥಿಪಂಜರಗಳು ಪತ್ತೆ!

0

ಚಿತ್ರದುರ್ಗ: ಪಾಳು ಬಿದ್ದ ಮನೆಯೊಂದರಲ್ಲಿ 3 ಅಸ್ಥಿಪಂಜರಗಳು ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆಯ ಜೈಲ್ ರಸ್ತೆಯ ಮನೆಯೊಂದರಲ್ಲಿ ಅಸ್ಥಿಪಂಜರ ಸಿಕ್ಕಿದೆ. ಮನೆಯ ಮುಂದೆ ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಎಂಬ ನಾಮಫಲಕ ಇದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್, ಪಿಎಸ್ಐ ರಘು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿಯಬೇಕಿದೆ.

Advertisement. Scroll to continue reading.

ಸ್ಥಳೀಯರ ಪ್ರಕಾರ:

2019ರಲ್ಲಿ ದೊಡ್ಡ ಸಿದ್ದವ್ವನಹಳ್ಳಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರ ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು 2 ಕೋಟಿ ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರಂತೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇದರಿಂದ ಬೇಸತ್ತು ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲಂತೆ. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಕಿಟಕಿಯಲ್ಲಿ ಮಾತಾಡಿಸಿ ಕಳುಹಿಸುತ್ತಿದ್ದರು ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳ ಮಾಹಿತಿ ಪ್ರಕಾರ ಸದರಿ ಮನೆಯ ನಿವಾಸಿಗಳು ನವೆಂಬರ್ 2022 ರಿಂದ ಯಾರಿಗೂ ಸಹ ಕಾಣದೆ ಇರುವುದು ಕಂಡುಬಂದಿರುತ್ತದೆಯಂತೆ. ನವೆಂಬರ್ ನಂತರದ ದಿನಗಳಲ್ಲಿ ಮನೆಯ ಸುತ್ತಮುತ್ತ ಸ್ವಲ್ಪ ದುರ್ವಾಸನೆ ಬಂದಂತಹ ಸ್ಥಿತಿಯಿತ್ತು. ನಾವು ಯಾವುದೋ ಪ್ರಾಣಿ ಸತ್ತಿರುವ ವಾಸನೆ ಬರುತ್ತದೆ ಎಂದು ತಿಳಿದುಕೊಂಡಿದ್ದರು ಎನ್ನಲಾಗಿದೆ.

ಬಿಗಿ ಬಂದೋಬಸ್ತ್ :

Advertisement. Scroll to continue reading.

ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು, ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿವೆ. ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ ಅಸ್ಥಿಪಂಜರಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮನೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com