ಉಪ್ಪಿನಂಗಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಲಾರಿಯಲ್ಲೇ ಮೃತಪಟ್ಟಿದ್ದು ಎರಡು ದಿನಗಳ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.
ಮೃತ ಚಾಲಕರನ್ನು ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಎಂದು ಗುರುತಿಸಲಾಗಿದೆ.
Advertisement. Scroll to continue reading.
ಎರಡು ದಿನಗಳ ಹಿಂದೆ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ತಂದಿದ್ದ ಚಾಲಕ ಖಲೀಲ್, ಲೋಡ್ ಖಾಲಿ ಮಾಡಿದ ಬಳಿಕ ರಾತ್ರಿ ವೇಳೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.
ಲಾರಿಯ ಕ್ಯಾಬಿನ್ ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿಯ ಚಾಲಕ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೂಡಲೇ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಮೃತದೇಹವನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಹೃದಯಾಘಾತವುಂಟಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
Advertisement. Scroll to continue reading.