ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಹಾವಳಿ ಮುಂದುವರೆದಿದೆ.
ಕಳೆದ 24 ಗಂಟೆಯಲ್ಲಿ 201 ಜನರಿಗೆ ಕೋವಿಡ್ ದೃಢಪಟ್ಟಿದೆ. 60 ಮಂದಿ ಡಿಸ್ಚಾರ್ಜ್ ಆಗಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
Advertisement. Scroll to continue reading.
ಕಳೆದ 24 ಗಂಟೆಯಲ್ಲಿ 7060 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.
ಇವರಲ್ಲಿ ಬೆಂಗಳೂರಲ್ಲಿ 30, ದಕ್ಷಿಣ ಕನ್ನಡ, ಬಳ್ಳಾರಿ, ದಾವಣಗೆರೆ, ಕೋಲಾರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಶಿವಮೊಗ್ಗ 03, ಮೈಸೂರು 10, ಹಾಸನ 04 ಸೇರಿದಂತೆ 201 ಜನರಿಗೆ ಕೊರೋನಾ ದೃಢಪಟ್ಟಿದೆ.
ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 833ಕ್ಕೆ ಏರಿಕೆಯಾಗಿದೆ. ಇವರಲ್ಲಿ 60 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಸೋಂಕಿನಿಂದ ಓರ್ವ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ನೀಡಿದೆ.
Advertisement. Scroll to continue reading.