ಹಾಸನ : ಪತಿಯೇ ತನ್ನ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ. ರಾಂಪುರ ಗ್ರಾಮದ ನಿವಾಸಿ ಜೀವನ್ (25) ಕೊಲೆಗೈದ ಆರೋಪಿ.
ಜೀವನ್, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.
Advertisement. Scroll to continue reading.
ಶನಿವಾರ ಸಂಜೆ ಮಾಡ್ರನ್ ಡ್ರೆಸ್ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗ ಜೀವನ್ ವಿರೋಧಿಸಿದ್ದ. ಕೊನೆಗೆ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.
ಬಳಿಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾಸನದ ಜೀವನ್ ಹಾಗೂ ಧಾರವಾಡದ ಜ್ಯೋತಿ ಅವರು ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಜ್ಯೋತಿ ಅವರು ಮಾಡರ್ನ್ ಉಡುಪುಗಳನ್ನು ಧರಿಸುವುದು ಜೀವನ್‌ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು. ಜೀವನ್ ಆಕ್ಷೇಪಕ್ಕೆ ಜ್ಯೋತಿ ಗಮನ ಕೊಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.
Advertisement. Scroll to continue reading.