ಹಾಸನ: ಅಕ್ರಮ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ.
ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ನೀಡಿ ಬೇಲೂರಿನ ಸೀನಿಯರ್ ಸಿವಿಲ್ ಜಡ್ಜ್ ಆದೇಶ ಹೊರಡಿಸಿದೆ.
ವಿಕ್ರಂ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
Advertisement. Scroll to continue reading.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ಶನಿವಾರ ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪ ಹಿನ್ನೆಲೆ ವಿಕ್ರಂ ಸಿಂಹರನ್ನು ಬಂಧಿಸಲಾಗಿತ್ತು. ವಿಕ್ರಂ ಸಿಂಹರನ್ನು ಇಂದು ಜಡ್ಜ್ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು.