ರಾಜ್ಯ

ರಾಜ್ಯದಲ್ಲಿ ಇಂದು 229 ಮಂದಿಗೆ ಕೊರೋನಾ ಸೋಂಕು ದೃಢ!

1

ಬೆಂಗಳೂರು : ರಾಜ್ಯದಲ್ಲಿ ಇಂದು 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಗಡಿ ಮುಟ್ಟಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾನುವಾರ 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1000ಕ್ಕೆ ಏರಿದೆ. ಈ ಪೈಕಿ 943 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 57 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. 

ಕಳೆದ 24 ಗಂಟೆಗಳಲ್ಲಿ 62 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 3,527 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 2,972 RTPCR ಮತ್ತು 555 ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ.

Advertisement. Scroll to continue reading.

ರಾಜಧಾನಿಯಲ್ಲಿ 83 ಸೋಂಕು ಪ್ರಕರಣಗಳು ದಾಖಲಾಗಿದೆ.

ಬಳ್ಳಾರಿ 4, ಬೆಳಗಾವಿ 1, ಬೆಂಗಳೂರು ಗ್ರಾಮಂತರ 9, ಬೆಂಗಳೂರು ನಗರ 64, ಚಾಮರಾಜನಗರ 12, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 5, ಚಿತ್ರದುರ್ಗ 4, ದಕ್ಷಿಣ ಕನ್ನಡ 10, ದಾವಣಗೆರೆ 5, ಧಾರವಾಡ 2, ಗದಗ 4, ಹಾಸನ 12, ಕಲಬುರಗಿ 5, ಕೋಲಾರ 3, ಕೊಪ್ಪಳ 5, ಮಂಡ್ಯ 22, ಮೈಸೂರು 26, ರಾಯಚೂರು 3, ರಾಮನಗರ 30, ಶಿವಮೊಗ್ಗ 4, ಉತ್ತರ ಕನ್ನಡ 5, ವಿಜಯನಗರ ಜಿಲ್ಲೆಯಲ್ಲಿ 9 ಪ್ರಕರಣ ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣವು ಶೇ.6.49 ಪ್ರತಿಶತದಷ್ಟಿದ್ದರೆ, ಪ್ರಕರಣದ ಸಾವಿನ ಪ್ರಮಾಣವು ಶೇ.0.00 ಪ್ರತಿಶತದಷ್ಟಿದೆ ಎಂದು ಆರೋಗ್ಯ ಇಲಾಖೆಯ ದತ್ತಾಂಶಗಳು ಮಾಹಿತಿ ನೀಡಿವೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com