ಕರಾವಳಿ

ರಾಜ್ಯಮಟ್ಟದ ಯುವಜನೋತ್ಸವ

0


ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಜನವರಿ 6 ಮತ್ತು 7 ರಂದು ಬಳ್ಳಾರಿ ಜಿಲ್ಲೆಯಲ್ಲಿ ಸಂಘಟಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.


ಸ್ಪರ್ಧಿಗಳು ಜ. 6 ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ:0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com