ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮುಂಜಾನೆ ಕರಾವಳಿಯಲ್ಲಿ ಮಳೆಯಾಗಿದೆ.ಮಂಗಳೂರು ನಗರದಲ್ಲಿ ಬೆಳಗ್ಗೆ ಗುಡುಗು ಸಹಿತ ತುಂತುರು ಮಳೆಯಾಗಿದೆ. ಉಡುಪಿಯ ಹಲವು ಭಾಗಗಳಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.
Advertisement. Scroll to continue reading.
ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಶೀತಗಾಳಿಯಿದ್ದು, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Advertisement. Scroll to continue reading.