ಭೋಪಾಲ್ : ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾ ‘ಆಶಾ’ ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಮರಿಗಳ ಫೋಟೊ ಹಂಚಿಕೊಂಡಿದ್ದಾರೆ.
ಕುನೊ ರಾಷ್ಟ್ರೀಯ ಉದ್ಯಾನವನವು ಮೂರು ಹೊಸ ಸದಸ್ಯರನ್ನು ಸ್ವಾಗತಿಸಿದೆ ಎಂದು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನಮೀಬಿಯಾದ ಚಿರತೆ ಆಶಾಗೆ ಮರಿಗಳು ಜನಿಸಿವೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂಪಿಸಿದ ಚೀತಾ ಯೋಜನೆಗೆ ಸಂದ ಯಶಸ್ಸಾಗಿದೆ. ಈ ಯೋಜನೆಯಲ್ಲಿ ತೊಡಗಿರುವ ಎಲ್ಲಾ
Advertisement. Scroll to continue reading.
ತಜ್ಞರು, ಕುನೊ ವನ್ಯಜೀವಿ ಅಧಿಕಾರಿಗಳು ಮತ್ತು ಭಾರತದಾದ್ಯಂತ ಇರುವ ವನ್ಯಜೀವಿ ಉತ್ಸಾಹಿಗಳಿಗೆ ನನ್ನ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.