ರಾಜ್ಯ

ಶ್ರೀಕಾಂತ್ ಪೂಜಾರಿಯಂತವರನ್ನು ಬಂಧಿಸದೆ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಸಿಎಂ ಸಿದ್ದರಾಮಯ್ಯ

1

ಬೆಂಗಳೂರು: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ  ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ವ್ಯಂಗ್ಯವಾಡಿದ್ದಾರೆ.

ಅಲ್ಲದೇ, ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಾಗಿರುವ, 16 ಪ್ರಕರಣಗಳು ಹಾಗೂ ಎಲ್ಲಾ ಪ್ರಕರಣಗಳ ವಿವರಣೆಯುಳ್ಳ ಪಟ್ಟಿಯನ್ನು  ಸಿಎಂ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. 

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ.

Advertisement. Scroll to continue reading.

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ.

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ.

ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?

ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ಹೇಳಿದ್ದಾರೆ.

Advertisement. Scroll to continue reading.

Click to comment

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com