ರಾಜ್ಯ

ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು

1

ಹುಬ್ಬಳ್ಳಿ: ಶ್ರೀರಾಮ ಜನ್ಮ ಭೂಮಿ ಗಲಭೆ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದೆ. 

ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 29ರಂದು ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. 

ಪ್ರಕರಣ ಮೂರನೇ ಆರೋಪಿಯಾಗಿರುವ ಶ್ರೀಕಾಂತ್‌ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 143, 147, 436, 427 ಹಾಗೂ 149 ಅಡಿ ಪ್ರಕರಣವನ್ನು ದಾಖಲು ಮಾಡಲಾಗಿತ್ತು.

Advertisement. Scroll to continue reading.

ಈ ಪ್ರಕರಣದ ಸಂಬಂಧ ಆರೋಪ ಪಟ್ಟಿಯನ್ನೂ ಸಲ್ಲಿಸಲಾಗಿತ್ತು.

1992ರಲ್ಲಿ ಅಯೋಧ್ಯೆ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್‌ ಪೂಜಾರಿ ಭಾಗಿಯಾಗಿದ್ದರು. ಇತ್ತೀಚೆಗೆ ಇವರನ್ನು ಬಂಧನ ಮಾಡಲಾಗಿತ್ತು. ಇದರಿಂದ ರಾಜ್ಯದಲ್ಲಿ ಬಿಜೆಪಿ  ಬೃಹತ್‌ ಪ್ರತಿಭಟನೆ ನಡೆಸಿತ್ತು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com