ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತ ಸವಾರನನ್ನು
ಎಳಂಗೋವನ್ ಸೆಂಕತ್ತವಲ್(43) ಎಂದು ಗುರುತಿಸಲಾಗಿದೆ.
ಶನಿವಾರ ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್ ಸವಾರ ತೆರಳುತಿದ್ದರು. ಅದೇ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು. ಈ ವೇಳೆ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ.
Advertisement. Scroll to continue reading.
ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು, ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಎಚ್‌ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
Advertisement. Scroll to continue reading.