ಬೈಂದೂರು : ನಿಂತಿದ್ದ ಲಾರಿಗೆ ಹಿಂಬದಿಯಿAದ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಲಾವಣ್ಯ ಮೃತಪಟ್ಟವರು ಎಂದು ತಿಳಿದುಬಂದಿದೆ.
Advertisement. Scroll to continue reading.
ಕೊಚ್ಚಿಯಲ್ಲಿ ಸರಕು ತುಂಬಿಸಿಕೊAಡು ಗೋವಾಕ್ಕೆ ಹೊರಟ ಲಾರಿಯನ್ನು ಚಾಲಕ ಮೂತ್ರ ವಿಸರ್ಜನೆಗೆಂದು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದರು. ಈ ಸಂದರ್ಭ ವೇಗವಾಗಿ ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಕಾರು ವೇಗ ನಿಯಂತ್ರಿಸಲಾಗದೆ ಲಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಲಾವಣ್ಯ ರವರಿಗೆ ತಲೆಗೆ ಗಂಭೀರ ಸ್ವರೂಪದದ ರಕ್ತಗಾಯವಾಗಿ ಪ್ರಜ್ಞೆ ತಪ್ಪಿದ್ದು, ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಇನ್ನು ಕಾರಿನ ಚಾಲಕ ಹೇಮಂತನಿಗೆ ಸಣ್ಣಪುಟ್ಟ ತರಚಿದ ಗಾಯ ಉಂಟಾಗಿದೆ ಎನ್ನಲಾಗಿದೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.