ಬೆಂಗಳೂರು: ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನೆ/ಮಂಗಳಾರತಿಯನ್ನು ನಡೆಸಲು ಸೂಚಿಸಿ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಸುತ್ತೋಲೆಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಬರೆದುಕೊಂಡಿದ್ದಾರೆ.
Advertisement. Scroll to continue reading.