ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಮೃತರನ್ನು ಶಂಕರ್, ಮಹದೇವು ಎಂದು ಗುರುತಿಸಲಾಗಿದೆ.
Advertisement. Scroll to continue reading.
ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮೂವರು ಕೆಲಸ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಬಳಿಕ ಕ್ಯಾಮೆರಾ ಇದ್ದ ಕಂಬಕ್ಕೂ ಡಿಕ್ಕಿ ಹೊಡೆದು, ಡಿವೈಡರ್ ಪಕ್ಕದ ರಸ್ತೆಗೆ ಮಗುಚಿಬಿದ್ದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪರಿಣಾಮ ಶಂಕರ್ ಹಾಗೂ ಮಹದೇವು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡಿರುವ ಕಿಶೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆಂದು ಹೇಳಲಾಗುತ್ತಿದೆ.
Advertisement. Scroll to continue reading.
ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.