ರಾಷ್ಟ್ರೀಯ

ಫಾಸ್ಟ್ಯಾಗ್‌ ಬಳಕೆದಾರರಿಗೆ ಎಚ್ಚರ…ಜನವರಿ 31ರ ನಂತರ ಫಾಸ್ಟ್‌ಟ್ಯಾಗ್‌ ನಿಷ್ಕ್ರಿಯ!

0

ನವದೆಹಲಿ:  ಬೇರೆ ಬೇರೆ ವಾಹನಗಳಿಗೆ ಒಂದೇ ಫಾಸ್ಟ್ಯಾಗ್‌ ಅಥವಾ ಒಂದೇ ವಾಹನಕ್ಕೆ ಹಲವು ಫಾಸ್ಟ್ಯಾಗ್‌ ಬಳಕೆ ಪ್ರಕರಣಗಳನ್ನು ಮನಗಂಡಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ‘ಒಂದು ವಾಹನ, ಒಂದು ಫಾಸ್ಟ್‌ಟ್ಯಾಗ್’ ಅಭಿಯಾನವನ್ನು ಪ್ರಾರಂಭಿಸಿದೆ.

ಈ ಹಿನ್ನೆಲೆಯಲ್ಲಿ ಫಾಸ್ಟ್ಯಾಗ್‌ ಹೊಂದಿರುವ ವಾಹನ ಮಾಲೀಕರು, ಫಾಸ್ಟ್ಯಾಗ್‌ ನಿಷ್ಕ್ರಿಯಗೊಳ್ಳುವುದನ್ನು ತಪ್ಪಿಸಲು ಜನವರಿ 31ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ.

ಇದೇ ವೇಳೆ, ಇ-ಕೆವೈಸಿ ಭರ್ತಿಯ ಜತೆಗೆ ಜನವರಿ 31ರೊಳಗೆ ತಮ್ಮ ಬಳಿ ಇರುವ ಹಲವು ಫಾಸ್ಟ್ಯಾಗ್‌ಗಳ ಪೈಕಿ ಇತ್ತೀಚೆಗೆ ಖರೀದಿಸಿದನ್ನು ಹೊರತುಪಡಿಸಿ ಉಳಿದದ್ದನ್ನು (ಇದ್ದರೆ) ಬ್ಯಾಂಕ್‌ಗೆ ಒಪ್ಪಿಸಬೇಕು. ಬಳಿಕ ಗ್ರಾಹಕರ ಬಳಿ ಇರುವ ತೀರಾ ಇತ್ತೀಚಿನ ಫಾಸ್ಟ್ಯಾಗ್‌ ಹೊರತುಪಡಿಸಿ ಉಳಿದಿದ್ದೆಲ್ಲಾ ನಿಷ್ಕ್ರಿಯವಾಗುತ್ತದೆ. ಒಂದು ವೇಳೆ ಇ – ಕೆವೈಸಿ ಮಾಡಿಸದೇ ಇದ್ದರೆ ಫಾಸ್ಟ್ಯಾಗ್‌ನಲ್ಲಿ ಹಣ ಇದ್ದ ಹೊರತಾಗಿಯೂ ಅದು ಬಳಕೆಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Advertisement. Scroll to continue reading.

ಈ ಬಗ್ಗೆ ಹೆಚ್ಚಿನ ಮಾಹಿತಿಯುನ್ನು ನೀವು ಫಾಸ್ಟ್ಯಾಗ್‌ ಪಡೆದುಕೊಂಡ ಬ್ಯಾಂಕ್‌ಗಳಿಗೆ ಹೋಗಿ ತಿಳಿಯಬಹುದು ಅಥವಾ ಟೋಲ್‌ ಪ್ಲಾಜಾಗೆ ಹೋಗಿ ಪಡೆಯಬಹುದು ಅಥವಾ ಫಾಸ್ಟ್ಯಾಗ್‌ ಟೋಲ್‌ ಫ್ರೀ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಸಲಹೆ ನೀಡಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com