ತೀರ್ಥಹಳ್ಳಿ : ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶರ್ಮಿತಾ ಬಿ.ಯು. (24) ಮೃತ ಮಹಿಳೆ.
ಬಿಜ್ಜಳ ಗ್ರಾಮದ ಶರ್ಮಿತಾ 2023ರ ಮಾರ್ಚ್ ತಿಂಗಳಿನಲ್ಲಿ ದಾಸನಕೊಡಿಗೆ ಗ್ರಾಮದ ವಿದ್ಯಾರ್ಥ್ ಎಂಬ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದರು.
ಸೋಮೇಶ್ವರ ವನ್ಯಜೀವಿ ಅಭಯಾರಣ್ಯದಲ್ಲಿ ರಾತ್ರಿ ಪಾಳಿಯ ಕೆಲಕ್ಕೆ ಪತಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪತಿಯ ಮನೆಯಲ್ಲಿ ಅತ್ತೆ, ಮಾವ ಮನೆಯಲ್ಲಿ ಇದ್ದರು ಎನ್ನಲಾಗಿದೆ.
Advertisement. Scroll to continue reading.
ರಾತ್ರಿ ಮಲಗಲು ಮನೆಯ ಉಪ್ಪರಿಗೆ ಕೊಠಡಿಗೆ ತೆರಳಿದ್ದ ಶರ್ಮಿತಾ ಬೆಳಿಗ್ಗೆ ಬಾಗಿಲು ತೆರೆದಿರಲಿಲ್ಲ. ಅನುಮಾನದಿಂದ ಮನೆಯ ಕೆಲಸದವರು ಕಿಟಕಿಯಿಂದ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಯುವತಿಯ ಪಾಲಕರಿಗೆ ವಿಷಯ ತಿಳಿಸಿದ್ದಾರೆ.
ಶರ್ಮಿತಾ ಪಾಲಕರು ಬಂದ ನಂತರ ಕೊಠಡಿಯ ಬಾಗಿಲು ಒಡೆಯಲಾಗಿದೆ. ಮೃತದೇಹದ ಬಳಿ ಮರಣಪತ್ರ ಲಭ್ಯವಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿದೆ ಎನ್ನಲಾಗಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.