ಗುಜರಾತ್ : ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಸಾವಿಗೀಡಾಗಿರುವ ದುರಂತ ನಡೆದಿದೆ. ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದೆ.
ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಜನ ಸಾವನ್ನಪ್ಪಿದ್ದು, ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ಸಾಗಿಸಲಾಯಿತು.
ಆಸ್ಪತ್ರೆಯಲ್ಲಿ ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿದ್ದು, ಶಾಸಕರು ಸೇರಿದಂತೆ ಸ್ಥಳೀಯ ಮುಖಂಡರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
Advertisement. Scroll to continue reading.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ದುರಂತದ ನಂತರ ಸಂತಾಪ ಸೂಚಿಸಿದ್ದಾರೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ದೇವರು ಅವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.