ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ‘ಸೂರ್ಯೋದಯ ಯೋಜನೆ’ ಘೋಷಿಸಿದ್ದಾರೆ.
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ದೇಶವಾಸಿಗಳು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಹೊಂದಬೇಕೆಂಬ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದರು.
ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳ ಮೇಲ್ಛಾವಣಿ ಮೇಲೆ ಸೋಲಾರ್ ಅಳವಡಿಸಲಾಗುತ್ತದೆ.
Advertisement. Scroll to continue reading.
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದರು.