ನವದೆಹಲಿ : ಭಾರತದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಘೋಷಣೆಯಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ, ಕರ್ಪೂರಿ ಠಾಕೂರ್ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
ಹಿಂದುಳಿದ ವರ್ಗದ ನಾಯಕನಾಗಿ ಗುರುತಿಸಿಕೊಂಡಿದ್ದ ಕರ್ಪೂರಿ ಠಾಕೂರ್ ಅತ್ಯುನ್ನತ ನಾಯಕರಾಗಿದ್ದರು. ಇದೀಗ ಅವರಿಗೆ ಕೇಂದ್ರ ಸರ್ಕಾರ ಕರ್ಪೂರಿ ಠಾಕೂರ್ಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.
ಸ್ವಾತಂತ್ರ್ಯ ಹೋರಾಟಗಾರ :
Advertisement. Scroll to continue reading.
1924ರಲ್ಲಿ ಹುಟ್ಟಿದ ಕರ್ಪೂರಿ ಠಾಕೂರ್, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ತೊಡಗಿಸಿಕೊಂಡ ಸ್ವಾತಂತ್ರ್ಯ ಹೋರಾಟಗಾರ. ಸ್ವಾತಂತ್ರ್ಯ ಹೋರಾಟದಲ್ಲಿ ಧುಮಿಕಿದ ಕರ್ಪೂರಿ ಠಾಕೂರ್ 26 ತಿಂಗಳು ಜೈಲು ವಾಸ ಅನುಭವಿಸಿದ್ದರು.
ಭಾರತದ ಸ್ವಾತಂತ್ರ್ಯ ಸಿಕ್ಕ ಬಳಿಕ ಬಿಹಾರ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಪೂರಿ ಠಾಕೂರ್, 1952ರಲ್ಲಿ ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ಸೋಶಿಯಲಿಸ್ಟ್ ಪಾರ್ಟಿಯ ಅಭ್ಯರ್ಥಿಯಾಗಿ ತಾಜ್ಪುರ ಕ್ಷೇತ್ರದಿಂದ ಸ್ಪರ್ಧಿಸಿ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಶಿಕ್ಷಣ ಸಚಿವರಾಗಿದ್ದ ವೇಳೆ ಬಿಹಾರ ಶಾಲೆಗಳಲ್ಲಿ ಇಂಗ್ಲೀಷ್ ಕಡ್ಡಾಯವನ್ನು ತೆಗೆದು ಹಾಕಿ ಆಯ್ಕೆಯಾಗಿ ಮಾಡಿ ಹೊಸ ಕ್ರಾಂತಿ ಆರಂಭಿಸಿದ್ದರು.
1970ರಿಂದ 1971 ಹಾಗೂ 1977ರಿಂದ 1979ರ ವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು.
1988ರಲ್ಲಿ ತಮ್ಮ 64 ವಯಸ್ಸಿನಲ್ಲಿ ನಿಧನರಾದರು.
Advertisement. Scroll to continue reading.