ಕ್ರೀಡೆ

ಆಸ್ಟ್ರೇಲಿಯಾ ಓಪನ್ : ಭರ್ಜರಿ ಗೆಲುವಿನೊಂದಿಗೆ ಐತಿಹಾಸಿಕ ದಾಖಲೆ ಬರೆದ ರೋಹನ್ ಬೋಪಣ್ಣ

1

ಮೆಲ್ಬೋರ್ನ್ : ಭಾರತದ ಹಿರಿಯ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದಯ, ಸಾಧನೆ ಮೆರೆದಿದ್ದಾರೆ.

ಶನಿವಾರ ನಡೆದ ಜಿದ್ದಾಜಿದ್ದಿನ ಪುರುಷರ ಡಬಲ್ಸ್ ಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌, ಇಟಲಿಯ ಸಿಮೋನ್ ಬೊಲೆಲ್ಲಿ – ಆ್ಯಂಡ್ರಿಯಾ ವಸಸ್ಸೊರಿ ವಿರುದ್ಧ 7-6(7-0), 7-5 ನೇರ ಸೆಟ್‌ಗಳಿಂದ ಗೆಲುವು ಸಾಧಿಸಿದರು.

ಆ ಮೂಲಕ ಪುರುಷರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಗೆದ್ದು ಚೊಚ್ಚಲ ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಎತ್ತಿ ಹಿಡಿದಿದ್ದು, ಓಪನ್ ಯುಗದಲ್ಲಿ ಗ್ರ್ಯಾನ್‌ ಸ್ಲಾಮ್‌ ಟ್ರೋಫಿ ಗೆದ್ದ ಅತಿ ಹಿರಿಯ ಟೆನಿಸ್ ಆಟಗಾರ ಎಂಬ ಕೀರ್ತಿಗೆ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಜೊತೆಗೆ ಇದು ರೋಹನ್ ಬೋಪಣ್ಣಗೆ ಒಲಿದ 2ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿಯಾಗಿದ್ದು, ಇದಕ್ಕೂ ಮುನ್ನ ಅವರು 2017ರಲ್ಲಿ ಫ್ರೆಂಚ್ ಓಪನ್ ಟೂರ್ನಿಯ ವಿಶ್ರ ಡಬಲ್ಸ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. 

ಟೆನಿಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಅಮೆರಿಕದ ಟೆನಿಸ್ ಆಟಗಾರ ಮೈಕ್ ಬ್ರಯಾನ್ (41 ವರ್ಷ 76 ದಿನ) ಹೆಸರಿನಲ್ಲಿತ್ತು. ಇದೀಗ ಆಸ್ಟ್ರೇಲಿಯನ್ ಓಪನ್​ ಗೆಲುವಿನೊಂದಿಗೆ ಬೋಪಣ್ಣ (43 ವರ್ಷ 329 ದಿನ) ಮೈಕ್ ಬ್ರಿಯಾನ್ ದಾಖಲೆ ಮುರಿದಿದ್ದಾರೆ.

Advertisement. Scroll to continue reading.

ಅಂದು ಕೆನಡಾದ ಗ್ಯಾಬ್ರಿಯೆಲಾ ಡಬ್ರೊವೊಸ್ಕಿ ಜತೆಗೂಡಿ ಆಡುವ ಮೂಲಕ ಈ ಸಾಧನೆ ಮಾಡಿದ್ದರು. 2013 ಮತ್ತು 2023ರಲ್ಲಿ ಅಮೆರಿಕ ಓಪನ್​ ಟೂರ್ನಿಯಲ್ಲಿ ಫೈನಲ್​ ಪ್ರವೇಶಿಸಿದ್ದರೂ ಇಲ್ಲಿ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. 

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com