ಬಂಟ್ವಾಳ : ಕಾಡಿಗೆ ವ್ಯಾಪಿಸುತ್ತಿದ್ದ ಬೆಂಕಿ ನಂದಿಸಲು ಹೋಗಿ ವೃದ್ಧ ದಂಪತಿ ಜೀವವನ್ನೇ ಕಳೆದುಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ಈ ಘಟನೆ ನಡೆದಿದೆ.
Advertisement. Scroll to continue reading.
ಮನೆ ಪಕ್ಕದ ಕಾಡಿಗೆ ಬೆಂಕಿ ವ್ಯಾಪಿಸಿದ್ದನ್ನು ಕಂಡು ಬೆಂಕಿಯನ್ನು ನಂದಿಸಲು ವೃದ್ಧ ದಂಪತಿ ಯತ್ನಿಸಿದ್ದು, ಸಜೀವದಹನವಾಗಿದ್ದಾರೆ ಎನ್ನಲಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.