ನವದೆಹಲಿ: ಕೇಂದ್ರ ಚುನಾವಣಾ ಆಯೋಗ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದೆ. ಫೆಬ್ರವರಿ 27 ರಂದು ಮತದಾನ ನಡೆಯಲಿದೆ.
ರಾಜ್ಯದ ನಾಲ್ಕು ಸ್ಥಾನಗಳಿಗೆ ಸೇರಿದಂತೆ ದೇಶದ ಒಟ್ಟು 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಮತ್ತು ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
Advertisement. Scroll to continue reading.
ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ರವರ ಅವಧಿ ಮುಕ್ತಾಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎಲ್ಲೆಲ್ಲಿ ?
ಉತ್ತರ ಪ್ರದೇಶದ 10, ಮಹಾರಾಷ್ಟ್ರ 6, ಬಿಹಾರ 6, ಪಶ್ಚಿಮ ಬಂಗಾಳ 5, ಮಧ್ಯ ಪ್ರದೇಶ 5, ಗುಜರಾತ್ 4, ಆಂಧ್ರ ಪ್ರದೇಶ 3, ತೆಲಂಗಾಣ 3, ರಾಜಸ್ಥಾನ 3, ಕರ್ನಾಟಕ 4, ಉತ್ತರಾಖಂಡ 1, ಛತ್ತೀಸ್‌ಗಢ 1, ಒಡಿಶಾ 3, ಹರ್ಯಾಣ 1 ಹಾಗೂ ಹಿಮಾಚಲ ಪ್ರದೇಶದಲ್ಲಿ 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
Advertisement. Scroll to continue reading.