ನವದೆಹಲಿ: ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಮಂತ್ರಿಯಾಗಿ ದಾಖಲೆ ಬರೆದಿದ್ದಾರೆ.
ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಸತತ ಐದು ಬಜೆಟ್‌ಗಳನ್ನು ಮಂಡಿಸಿರುವ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ.ಚಿದಂಬರಂ ಹಾಗೂ ಯಶವಂತ್ ಸಿನ್ಹಾ ಅವರ ದಾಖಲೆಗಳನ್ನೂ ನಿರ್ಮಲಾ ಸೀತಾರಾಮನ್ ಅವರು ಮುರಿದಿದ್ದಾರೆ.
Advertisement. Scroll to continue reading.
ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಿದ್ದು, ಚುನಾವಣೆಗೂ ಮುನ್ನ ಮಂಡಿಸಲಿರುವ ಬಜೆಟ್ ಆಗಿರುವುದರಿಂದ ಇದು ಪೂರ್ಣ ಪ್ರಮಾಣದ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಿದೆ.
ಬಜೆಟ್‌ನಲ್ಲಿ ಏನಿದೆ?
1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಗರ್ಭಕೋಶ ಕ್ಯಾನ್ಸರ್ ತಡೆಗಾಗಿ ಕೇಂದ್ರ ಸರ್ಕಾರವು ಉಚಿವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.
Advertisement. Scroll to continue reading.
ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ
ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ ಮಾಡುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
40 ಸಾವಿರ ಹಳೆಯ ಬೋಗಿಗಳನ್ನು ವಂದೇ ಭಾರತ್ ಬೋಗಿಗಳನ್ನಾಗಿ ಪರಿವರ್ತಿಸಲಾಗುವುದು ಎಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇದರಿಂದ ಪ್ರಯಾಣಿಕರ ಸುರಕ್ಷತೆಯೂ ಹೆಚ್ಚಲಿದೆ. 3 ಮೀಸಲಾದ ಸರಕು ಸಾಗಣೆ ಕಾರಿಡಾರ್‌ಗಳನ್ನು ರಚಿಸಲಾಗಿದ್ದು, ಇದು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸಹಾಯಕವಾಗಲಿದೆ ಎಂದರು.
4 ಕೋಟಿ ರೈತರು ಬೆಳೆ ವಿಮೆಯ ಲಾಭ ಪಡೆದಿದ್ದಾರೆ. ಉಚಿತ ಪಡಿತರದಿಂದಾಗಿ 80 ಕೋಟಿ ಜನರ ಆಹಾರದ ಚಿಂತೆ ದೂರಾವಗಿದೆ ಎಂದ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ, ಮಹಿಳಾ ಉದ್ಯಮಿಗಳಿಗೆ 30 ಕೋಟಿ ಮುದ್ರಾ ಯೋಜನೆ ಸಾಲಗಳನ್ನು ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ 70% ಮನೆಗಳನ್ನು ನೀಡಲಾಗಿದೆ. ನಮ್ಮ ಸರ್ಕಾರವು ಜವಾಬ್ದಾರಿಯುತ, ಜನಕೇಂದ್ರಿತ ಮತ್ತು ವಿಶ್ವಾಸ ಆಧಾರಿತ ಆಡಳಿತವನ್ನು ನಾಗರಿಕರ ಮೊದಲ ಆದ್ಯತೆಯನ್ನಾಗಿ ನೀಡಿದೆ ಎಂದು ಹೇಳಿದರು.
Advertisement. Scroll to continue reading.