ಉಡುಪಿ : ಮಾಚೀದೇವರ ಜೀವನ ಆದರ್ಶಗಳನ್ನು ಅವಲೋಕನÀ ಮಾಡುವ ಮೂಲಕ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸುಧಾರಣೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ ಶ್ರೀ ಮಡಿವಾಳ ಜಯಂತಿ ಕಾರ್ಯಕ್ರಮದಲ್ಲಿ, ಮಾಚೀದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.
Advertisement. Scroll to continue reading.
ಶರಣರ ಇತಿಹಾಸದ ಸಾಹಿತ್ಯಗಳು, ನಾಣ್ಣುಡಿ ಹಾಗೂ ತತ್ವಗಳನ್ನು ಪ್ರತಿಯೊಬ್ಬರಲ್ಲೂ ಪಾಲಿಸಿದ್ದಲ್ಲಿ ಸಮಾಜದಲ್ಲಿ ಬದಲಾವಣೆ ಸಾಧ್ಯ. ಮಾಚೀದೇವರ ವಚನಗಳು ಸಮಾಜದಲ್ಲಿನ ಮೂಢನಂಬಿಕೆಗಳನ್ನು ತೊರೆದು ಹಾಕಲು ಹಾಗೂ ಸಮಾಜ ಸುಧಾರಣೆಗೆ ಸಹಕಾರಿಯಾಗಿವೆ ಎಂದರು.
ಆಧುನಿಕ ಸಮಾಜದಲ್ಲಿ ಸರ್ವಧರ್ಮಗಳನ್ನು ಒಂದಾಗಿ ನೋಡಬೇಕು. ಶಿವಶರಣರು ಜಯಂತಿ ಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಅವರ ಆಶಯಗಳು ದಾರಿದೀಪವಾಗಬೇಕು ಎಂದರು.
ಮಡಿವಾಳ ಸಂಘದ ಜಿಲ್ಲಾ ಅಧ್ಯಕ್ಷ ಪ್ರದೀಪ್ ಮಡಿವಾಳ ಹೆರ್ಗ ಮಾತನಾಡಿ, ಮಡಿವಾಳ ಸಮಾಜದ ಮೂಲಪುರುಷ ಮಾಚೀದೇವರು. ಕಲ್ಯಾಣ ನಾಡಿನಲ್ಲಿ ಕ್ರಾಂತಿ ಮಾಡಿದ ಇವರು ಹಲವಾರು ವಚನ ಸಾಹಿತ್ಯಗಳನ್ನು ರಚಿಸಿದ್ದಾರೆ. ಬಸವಣ್ಣನವರ ಕಾಯಕವೇ ಕೈಲಾಸದ ಮಾತನ್ನು ಅನುಸರಿಸುತ್ತಾ, ಶಿವಶರಣೆಯರ ವಸ್ತç ಮಡಿಗೊಳಿಸುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 12 ನೇ ಶತಮಾನದಲ್ಲಿ ಬಿಜ್ಜಳ ರಾಜನು ವಚನ ಸಾಹಿತ್ಯಗಳನ್ನು ನಾಶ ಪಡಿಸುವ ಸಂದರ್ಭದಲ್ಲಿ ವಚನ ಸಾಹಿತ್ಯಗಳನ್ನು ರಕ್ಷಿಸುವ ಉದ್ದೇಶದಿಂದ ಅವರೊಂದಿಗೆ ಹೋರಾಟ ಮಾಡಲು ತನ್ನ ಕೈಯಲ್ಲಿರುವ ಶಸ್ತçವನ್ನು ಉಪಯೋಗಿಸಿ ಯಶಸ್ವಿಯಾಗಿದ್ದಾರೆ ಎಂದರು.
ಅನುಭವ ಮಂಟಪ ನಿರ್ಮಾಣದಲ್ಲಿ ಇವರ ಕೊಡುಗೆ ಅಪಾರ. ತಮ್ಮ ಕಾಯಕಕ್ಕೆ ಪ್ರಥಮ ಪ್ರಾಶಸ್ತö್ಯ ನೀಡಿ ಅರಸುತನ ಮೇಲಲ್ಲ, ಅಗಸತನ ಕೀಳಲ್ಲ ಎಂದು ಜಗತ್ತಿಗೆ ಸಾರಿದ ಇವರು, ತನ್ನ ಗುರು ವೀರಕಂಠಿ ಅವರೊಂದಿಗೆ ಜೀವಂತವಾಗಿ ಸಮಾಧಿಯಾಗಿದ್ದಾರೆ ಎಂದು ಇತಿಹಾಸದಲ್ಲಿ ಉಲ್ಲೇಖಿಸಲಾಗಿದೆ ಎಂದರು.
Advertisement. Scroll to continue reading.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಬಸವಣ್ಣನವರ ಸಮಕಾಲೀನರು ಮಡಿವಾಳ ಮಾಚೀದೇವ. ಮಾಚೀದೇವ ಅವರನ್ನು ವೀರಭದ್ರನ ಅವತಾರ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಇವರು ಸುಮಾರು 343 ವಚನಗಳನ್ನು ರಚಿಸಿದ್ದು, ಇದು ಸಮಾಜದಲ್ಲಿನ ಮೌಢ್ಯವನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಡಿವಾಳ ಸಮಾಜದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿ, ಭಾರತೀ ಚಂದ್ರಶೇಖರ್ ವಂದಿಸಿದರು.
ಇದೇ ಸಂದರ್ಭದಲ್ಲಿ ಮಡಿವಾಳ ಮಾಚೀದೇವರ ಜೀವನ ಚರಿತ್ರೆ ಹಾಗೂ ವಚನಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಶಾಲಾ ಶಿಕ್ಷಣ ಪಠ್ಯಪುಸ್ತಕದಲ್ಲಿ ಸೇರಿಸುವಂತೆ ಹಾಗೂ ಅಂಬಾಗಿಲಿನಲ್ಲಿರುವ ಮಡಿವಾಳ ಮಾಚೀದೇವ ಸಭಾಭವನ ಮುಕ್ತಾಯ ಹಂತದಲ್ಲಿದ್ದು, ಕಟ್ಟಡದ ಅಂಗಳದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸುವಂತೆ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Advertisement. Scroll to continue reading.