ಉಡುಪಿ: ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ ಭಾನುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಅಸ್ವಸ್ಥರಾಗಿದ್ದರು. ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ನಾಟಿ ಮದ್ದಿನ ಮೂಲಕ ಶ್ರೀನಿವಾಸ ಪೂಜಾರಿಯವರು ಪ್ರಸಿದ್ಧರಾಗಿದ್ದರು. ಅವದ ಬಳಿ ಮದ್ದಿಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದರು.
ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರು ಹಲವು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
Advertisement. Scroll to continue reading.